ಬಾಗಲಕೋಟೆ : ಪದವಿ ಪೂರ್ವ ಶಿಕ್ಷಣ ಇಲಾಖೆಯು ವ್ಯಾಸಂಗದಲ್ಲಿ ಶಿಕ್ಷಣ ಮಾಧ್ಯಮದ ಕುರಿತು ಹೊರಡಿಸಿರುವ ಆದೇಶವನ್ನು ಪುನರ್ ಪರಿಶೀಲಿಸಬೇಕು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದಲ್ಲಿ ಸೋಮವಾರ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ನೂರಾರು ಕಾರ್ಯಕರ್ತರು ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಎಬಿವಿಪಿ ಮುಖಂಡ ಯುವರಾಜ ಯಾದವ ಮಾತನಾಡಿ, ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಹಲವಾರು ದಶಕಗಳಿಂದ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಪರೀಕ್ಷಾ ವಿಷಯಗಳಿಗೆ ಸಂಬಂಧಿಸಿದಂತೆ ಅನೇಕ ನೀತಿ ನಿಯಮಗಳನ್ನು ರೂಪಿಸುತ್ತಾ ಬಂದಿದೆ. ಪ್ರಸಕ್ತ ವರ್ಷದಿಂದ ಕನ್ನಡ ಮಾಧ್ಯಮವನ್ನು ಆಯ್ಕೆ ಮಾಡಿಕೊಂಡವರು ಕಡ್ಡಾಯವಾಗಿ ಕನ್ನಡದಲ್ಲಿ ಪರಿಕ್ಷೆ ಬರೆಯುವಂತೆ ಆದೇಶವನ್ನು ಹೊರಡಿಸಿರುವುದು ಸರಿಯಲ್ಲ ಎಂದರು.
ವಾಣಿಜ್ಯ ವಿಭಾಗದ ವಿಷಯಗಳಾದ ಬಿಜಿನೆಸ್ ಸ್ಟಡೀಸ್ ಮತ್ತು ಅಕೌಂಟೆನ್ಸಿಗಳನ್ನು ಮಾತ್ರ ಕನ್ನಡ ಆಯ್ಕೆ ಮಾಡಿಕೊಂಡರು ಅವುಗಳನ್ನು ಆಂಗ್ಲ ಭಾಷೆಯಲ್ಲಿ ಬರೆಯುತ್ತಿದ್ದಾರೆ. ಈ ವಿಷಯಗಳಲ್ಲಿ ಬರುವ ಕೆಲವೊಂದು ಪದಗಳಿಗೆ ಕನ್ನಡದಲ್ಲಿ ಪದಗಳಿಲ್ಲ ಮತ್ತು ವ್ಯಾವಹಾರಿಕವಾಗಿ ಬಳಸಲು ಕನ್ನಡದಲ್ಲಿ ಪದಗಳಿಲ್ಲ ಮತ್ತು ಈ ವಿಷಯಗಳಿಗೆ ಸಂಬಂಧಿಸಿದಂತೆ ಕನ್ನಡದಲ್ಲಿ ಪುಸ್ತಕಗಳಿಲ್ಲ ಎಂಬ ಕಾರಣಕ್ಕೆ ಆಂಗ್ಲ ಭಾಷೆಯಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ತಿಳಿಸಿದರು.
ಗ್ರಾಮೀಣದ ಪ್ರದೇಶದ ಶೇ. 70 ರಷ್ಟು ವಿದ್ಯಾರ್ಥಿಗಳು ಹಳ್ಳಿಯಿಂದ ಬರುತ್ತಾರೆ ಅವರಿಗೆ ಹೆಚ್ಚಾಗಿ ಆಂಗ್ಲ ಮಾಧ್ಯಮದ ಮೇಲೆ ಹಿಡಿತವಿರುವುದಿಲ್ಲ, ಕಾರಣ ಅವರು ಕನ್ನಡ ಮಾಧ್ಯಮವನ್ನು ಆಯ್ಕೆ ಮಾಡಿಕೊಂಡಿರುತ್ತಾರೆ. ಆದರೆ ಕೆಲವೊಂದಿಷ್ಟು ವಿಷಯಗಳನ್ನು ಆಂಗ್ಲ ಭಾಷೆಯಲ್ಲಿ ಬರೆಯುವುದು ಅನಿವಾರ್ಯವಾಗಿರುತ್ತದೆ ಎಂದರು.
ಈ ಎಲ್ಲ ಕಾರಣಗಳಿಂದ ಪದವಿ ಶಿಕ್ಷಣ ಇಲಾಖೆಯು ತನ್ನ ಆದೇಶವನ್ನು ಪುನರ್ ಪರಿಶೀಲಿಸಿ ತಮ್ಮ ಹೊಸ ಆದೇಶದ ಬಗ್ಗೆ ಚರ್ಚಿಸಿ ನಂತರ ಮುಂದಿನ ತೀರ್ಮಾನ ಕೈಗೊಳ್ಳಬೇಕು. ಈ ಆದೇಶ ಮುಂದುವರೆದರೆ ಮುಂದಿನ ದಿನಗಳಲ್ಲಿ ಎಬಿವಿಪಿಯಿಂದ ಉಗ್ರವಾದ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.