ಜೈಪುರ: ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಗುಜ್ಜರ್ ಸಮುದಾಯ ರಾಜಸ್ತಾನದಲ್ಲಿ ನಡೆಸುತ್ತಿರುವ ಹೋರಾಟ ಸೋಮವಾರವೂ ಮುಂದುವರೆದಿದೆ.
ಸರ್ಕಾರಿ ಹುದ್ದೆಯಲ್ಲಿ ಶೇ.5ರಷ್ಟು ಮೀಸಲಾತಿ ನೀಡಬೇಕೆಂಬುದು ಗುಜ್ಜರ್ ಸಮುದಾಯದ ಬೇಡಿಕೆಯಾಗಿದೆ. ಹಲವು ವರ್ಷಗಳಿಂದ ಅವರು ಇದಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ.
ಪ್ರತಿಭಟನಾಕಾರರು ರೈಲು ಮತ್ತು ಹೆದ್ದಾರಿಗಳನ್ನು ಬಂದ್ ಮಾಡಿ ಉಗ್ರ ರೀತಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕ ಜೀವನ ಅಸ್ತವ್ಯಸ್ಥಗೊಂಡಿದೆ.
ಪ್ರತಿಭಟನಾ ನಿರತರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ, ಆದರೂ ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆಯನ್ನು ನಿಲ್ಲಿಸದಿರಲು ಗುಜ್ಜರ್ ಸಮುದಾಯ ಪಣತೊಟ್ಟಿದೆ.
ಈ ಬಗ್ಗೆ ರಾಜಸ್ಥಾನ ಸರ್ಕಾರ ಮತ್ತು ಗುಜ್ಜರ್ ನಾಯಕರ ನಡುವೆ ನಡೆದ ಒಂದು ಸುತ್ತಿನ ಮಾತುಕತೆ ವಿಫಲಗೊಂಡಿದೆ. ಇದರಿಂದಾಗಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.