ಮುಂಬಯಿ: ಮುಂಬಯಿ ವಿಮಾನನಿಲ್ದಾಣದ ವ್ಯಾಪ್ತಿಯಲ್ಲಿ ಶನಿವಾರ ಮಾನವ ರಹಿತ ಪ್ಯಾರಚೂಟ್ಗಳು ಹಾರಾಡುತ್ತಿರುವುದು ಪತ್ತೆಯಾಗಿದ್ದು, ಕೆಲಕಾಲ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಈ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದ್ದು, ವಿಮಾನನಿಲ್ದಾಣದಲ್ಲಿ ಹೈಅಲರ್ಟ್ ಈಗ ಘೋಷಿಸಲಾಗಿದೆ.
ಈ ಪ್ಯಾರಚೂಟ್ಗಳು ರಿಮೋಟ್ ಕಂಟ್ರೋಲ್ಡ್ ಆಗಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಇದು ಎಲ್ಲಿಂದ ಬಂತು ಮತ್ತು ಎಲ್ಲಿ ಲ್ಯಾಂಡ್ ಆಯಿತು ಎಂಬ ಬಗ್ಗೆ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ.
ಈ ಬಗ್ಗೆ ಉನ್ನತಮಟ್ಟದ ತನಿಖೆಗೆ ಕೇಂದ್ರ ಸಚಿವಾಲಯ ಆಗ್ರಹಿಸಿದೆ. ಈ ಸಂಬಂಧ ಮುಂಬೈ ಪೊಲೀಸರು, ಮುಂಬೈ ನಗರದಲ್ಲಿರುವಂಥ ಎಲ್ಲಾ ಪ್ಯಾರಾಗ್ಲೈಡ್ ಸಂಸ್ಥೆಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.