ಮೈಸೂರು: ಇಂದು ಬೆಳಿಗ್ಗೆ ತುಲಾ ಲಗ್ನದಲ್ಲಿ ಕವಿ ಪ್ರೋ.ಕೆ.ಎಸ್ ನಿಸಾರ್ ಅಹ್ಮದ್ ಅವರು ನಾಡ ದೇವಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಮೈಸೂರು ದಸರಾಗೆ ಚಾಲನೆ ನೀಡಿದರು.
ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಸಚಿವರುಗಳು ನಿಸಾರ್ ಅಹ್ಮದ್ರವರೊಂದಿಗೆ ಮಹಿಷಾಸುರ ಪ್ರತಿಮೆ ಬಳಿಯಿಂದ ಚಾಮುಂಡೇಶ್ವರಿ ದೇವಾಲಯದವರೆಗೆ ಮೆರವಣಿಗೆ ಬಂದರು. ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.
ದೇವಾಲಯಲ್ಲಿನ ಬೆಳ್ಳಿ ಮಂಟಪದಲ್ಲಿ ವಿರಾಜಮಾನಳಾಗಿದ್ದ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಗಣ್ಯರು ಪುಷ್ಪಾರ್ಚನೆಯನ್ನು ಮಾಡಿದರು.
ಇಂದಿನಿಂದ ಮೈಸೂರಿನಲ್ಲಿ ಕ್ರೀಡಾ, ಯುವ ದಸರಾ, ಸಾಂಸ್ಕೃತಿಕ ದಸರಾಗಳ ರಸದೌತಣ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.