ಜಿನೆವಾ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ವಿವಿಧ ರಾಜಕೀಯ, ಸಾಮಾಜಿಕ ಹೋರಾಟಗಾರರು ಜಿನೆವಾದ ವಿಶ್ವಸಂಸ್ಥೆಯ ಮುಂದೆ ಪಾಕಿಸ್ಥಾನದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಯುನೈಟೆಡ್ ಕಾಶ್ಮೀರ ಪೀಪಲ್ಸ್ ನ್ಯಾಷನಲ್ ಪಾರ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಬಲೋಚಿಸ್ತಾನ ಮತ್ತು ಸಿಂಧ್ನ ಹೋರಾಟಗಾರರು ಇವರಿಗೆ ಬೆಂಬಲ ನೀಡಿದ್ದಾರೆ.
ವಿಶ್ವಸಂಸ್ಥೆಯ ಎದುರು ಒಟ್ಟು ಸೇರಿದ ಹೋರಾಟಗಾರರು ಫಲಕಗಳನ್ನು ಹಿಡಿದು, ಪಾಕ್ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ. ಅಲ್ಲದೇ ಮಾನವ ಹಕ್ಕುಗಳನ್ನು ಉಲ್ಲಂಘಟಿಸುತ್ತಿರುವ ಪಾಕ್ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಪಿಓಕೆ, ಬಲೂಚ್, ಸಿಂಧ್ ಭಾಗದ ಜನರನ್ನು ಮಾಧ್ಯಮಗಳಿಂದ ದೂರವಿರಿಸಲಾಗಿದೆ, ಅವರ ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗಿದೆ, ಹೋರಾಟಗಾರರನ್ನು ಕೊಲೆ ಮಾಡಲಾಗುತ್ತಿದೆ ಎಂದು ಇವರು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.