ಚೆನ್ನೈ: ವಿದ್ಯಾರ್ಥಿಗಳಲ್ಲಿ ಕೌಶಲ್ಯವನ್ನು ವೃದ್ಧಿಸಲು ಮತ್ತು ಅವರ ಸಾಮರ್ಥ್ಯವನ್ನು ಉತ್ತಮಪಡಿಸುವ ಸಲುವಾಗಿ ಎಲ್ಲಾ ಶಾಲೆಗಳಲ್ಲಿ ಯೋಗವನ್ನು ಜಾರಿಗೊಳಿಸಲು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ನಿರ್ಧರಿಸಿದ್ದಾರೆ.
ಎಲ್ಲಾ ಶಾಲೆಗಳಲ್ಲೂ ಯೋಗ ಕ್ಲಾಸನ್ನು ಆರಂಭಿಸಲಾಗುತ್ತದೆ. ಶೀಘ್ರದಲ್ಲೇ ಇದು ಅನುಷ್ಠಾನಕ್ಕೆ ಬರಲಿದೆ ಎಂದಿದ್ದಾರೆ.
ವಿದ್ಯಾರ್ಥಿಗಳ ಕೌಶಲ್ಯವನ್ನು ಉತ್ತೇಜಿಸಲು, ಅವರಿಗೆ ಮಾನಸಿಕ ಶಾಂತಿ, ದೈಹಿಕ ಬಲಿಷ್ಠತೆ ನೀಡಲು ಯೋಗ ತರಬೇತಿಯನ್ನು ಕೊಡಲು ನಿರ್ಧರಿಸಿರುವುದಾಗಿ ಅವರು ತಿಳಿಸಿದ್ದಾರೆ.
ಇದರಿಂದಾಗಿ ಮಕ್ಕಳ ಶೈಕ್ಷಣಿಕ ಆಸಕ್ತಿಯೂ ಹೆಚ್ಚಾಗಲಿದೆ, ವ್ಯಾಯಾಮವೂ ಸಿಗಲಿದೆ. ಬೊಜ್ಜುತನ ನಿವಾರಣೆಯಾಗಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.