ನವದೆಹಲಿ: ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರ ಹೆಸರನ್ನು ಕ್ರೀಡಾ ಸಚಿವಾಲಯ ಪದ್ಮಭೂಷಣ ಪುರಸ್ಕಾರಕ್ಕೆ ಸೋಮವಾರ ನಾಮನಿರ್ದೇಶನಗೊಳಿಸಿದೆ.
ರಿಯೋ ಒಲಿಂಪಿಕ್ ಬೆಳ್ಳಿ ಪದಕ ಗೆದ್ದುಕೊಂಡಿರುವ ಭಾರತದ ಮೊದಲ ಬ್ಯಾಡ್ಮಿಂಟನ್ ತಾರೆ ಇವರಾಗಿದ್ದಾರೆ. ಇತ್ತೀಚಿಗೆ ಕೊರಿಯಾ ಓಪನ್ ಚಾಂಪಿಯನ್ಶಿಪ್ ತಮ್ಮದಾಗಿಸಿಕೊಂಡಿದ್ದರು.
ಪದ್ಮಭೂಷಣಕ್ಕೆ ಈ ವರ್ಷ ಶಿಫಾರಸ್ಸುಗೊಂಡ ಎರಡನೇ ಕ್ರೀಡಾ ತಾರೆ ಸಿಂಧು. ಈಗಾಗಲೇ ಬಿಸಿಸಿಐ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಹೆಸರನ್ನು ಪದ್ಮಭೂಷಣಕ್ಕೆ ಶಿಫಾರಸ್ಸು ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.