ಕಾರವಾರ: ದೇಶದಲ್ಲಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ)ಗಳನ್ನು ಹೆಚ್ಚಿಸುವ ಮಹತ್ವಾಕಾಂಕ್ಷೆಯನ್ನು ಕೇಂದ್ರ ಸರ್ಕಾರ ಹೊಂದಿದೆ. ಪ್ರಸ್ತುತ 4,600 ಐಟಿಐಗಳಿವೆ. ಇನ್ನು ಒಂದು ವರ್ಷದಲ್ಲಿ ಇವುಗಳ ಸಂಖ್ಯೆಯನ್ನು 20 ಸಾವಿರಕ್ಕೆ ಏರಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.
ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲ ಸಚಿವಾಲಯದ ರಾಜ್ಯ ಖಾತೆ ಸಚಿವರಾಗಿ ನೇಮಕವಾದ ಬಳಿಕ ಇದೇ ಮೊದಲ ಬಾರಿಗೆ ಉತ್ತರಕನ್ನಡದ ಕಾರವಾರಕ್ಕೆ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಪರಿಶ್ರಮವಿಲ್ಲದ ಜೀವನ ಕೈಯಲ್ಲಿ ಲಾಟರಿ ಟಿಕೆಟ್ ಹಿಡಿದುಕೊಂಡು ಅಲೆದಾಡುವಂತೆ ಎಂದ ಅವರು, ಸರ್ಟಿಫಿಕೇಟ್ಗಿಂತ ಕೌಶಲ್ಯ, ಪ್ರತಿಭೆ, ಶ್ರಮ ಮುಖ್ಯ ಎಂದರು.
ಕಳೆದ 70 ವರ್ಷಗಳಲ್ಲಿ ದೇಶದಲ್ಲಿ ಕೇವಲ 4,600 ಐಟಿಐಗಳು ಮಾತ್ರ ಸ್ಥಾಪನೆಯಾಗಿವೆ, ಇವುಗಳ ಸಂಖ್ಯೆಯನ್ನು ಒಂದು ವರ್ಷದಲ್ಲಿ 20 ಸಾವಿರಕ್ಕೆ ಏರಿಕೆ ಮಾಡಲಿದ್ದೇವೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.