
ನವದೆಹಲಿ: ದೇಶದ ಪ್ರತಿ ಗ್ರಾಮ ಮತ್ತು ನಗರದ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸುವ ಮಹತ್ವದ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ’ಸೌಭಾಗ್ಯ-ಪ್ರತಿ ಮನೆಗೂ ಸಹಜ ವಿದ್ಯುತ್ ಯೋಜನೆ’ನ್ನು ಆರಂಭಿಸಲಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ಕಾರ್ಯಕಾರಣಿಯಲ್ಲಿ ಈ ಬಗ್ಗೆ ಘೋಷಣೆ ಮಾಡಲಿದ್ದಾರೆ. 2018ರ ವೇಳೆಗೆ ಎಲ್ಲಾ ಮನೆಗೂ ವಿದ್ಯುತ್ ಒದಗಿಸುವ ಗುರಿಯನ್ನು ಸಾಕಾರಗೊಳಿಸುವಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ.
ಬೆಳಕನ್ನೇ ಕಾಣದ 18 ಸಾವಿರ ಗ್ರಾಮಗಳಿಗೆ 1 ಸಾವಿರ ದಿನಗಳಲ್ಲಿ ವಿದ್ಯುತ್ ಪೂರೈಕೆ ಮಾಡುತ್ತೇವೆ ಎಂದು ಮೋದಿ 2015ರಲ್ಲಿ ಘೋಷಣೆ ಮಾಡಿದ್ದರು. ಇದೀಗ ಡೆಡ್ಲೈನ್ಗೂ ಮುನ್ನವೇ ಗುರಿ ತಲುಪುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



