ಹೈದರಾಬಾದ್: ತೆಲಂಗಾಣ ರಾಜ್ಯ 8 ವಿಭಾಗಗಳಲ್ಲಿ ರಾಷ್ಟ್ರೀಯ ಪ್ರವಾಸೋದ್ಯಮ ಅವಾರ್ಡ್ಗಳನ್ನು ಗೆದ್ದುಕೊಂಡಿದೆ.
ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವಿಜ್ಞಾನ ಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.
ತೆಲಂಗಾಣ ವಿವಿಧ 8 ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿರುವುದಕ್ಕೆ ಅಲ್ಲಿನ ಪ್ರವಾಸೋದ್ಯಮ ಕಾರ್ಯದರ್ಶಿ ಬುರ ವೆಂಕಟೇಶಮ್ ಸಂತಸ ವ್ಯಕ್ತಪಡಿಸಿದ್ದಾರೆ.
ತೆಲಂಗಾಣವನ್ನು ನಂ.1 ಪ್ರವಾಸೋದ್ಯಮ ತಾಣ ಮಾಡುವ ಗುರಿ ನಮ್ಮದು ಎಂದಿರುವ ಅವರು, ಕಳೆದ ವರ್ಷಕ್ಕಿಂತ 5 ಹೆಚ್ಚಿನ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದೇವೆ ಎಂದರು.
1990ರಿಂದ ಪ್ರವಾಸೋದ್ಯಮ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.