ನವದೆಹಲಿ: ಕೇಂದ್ರ ಸರ್ಕಾರದ ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಸ್ಕೀಮ್ ಅಡಿಯಲ್ಲಿ ಇದುವರೆಗೆ ಒಟ್ಟು 54 ಸಾವಿರ ಗೃಹ ಖರೀದಿದಾರರು ಇಂಟ್ರೆಸ್ಟ್ ಸಬ್ಸಿಡಿ ಪಡೆದುಕೊಂಡಿದ್ದಾರೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಬ್ಸಿಡಿ ಪಡೆದುಕೊಂಡವರಲ್ಲಿ 2,300 ಮಂದಿ ಮಧ್ಯಮ ಆದಾಯ ಗುಂಪಿನವರಾಗಿದ್ದಾರೆ.
ಗೃಹ ನಿರ್ಮಾಣ ಮಾಡುವವರಿಗೆ ಸಹಾಯವಾಗುವ ಸಲುವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ರೂ.2.6ಲಕ್ಷದವರೆಗಿನ ಗೃಹಸಾಲಗಳಿಗೆ ಇಂಟ್ರೆಸ್ಟ್ ಸಬ್ಸಿಡಿಯನ್ನು ನೀಡಲಾಗುತ್ತಿದೆ. ಇದರಡಿ ಇದುವರೆಗೆ 26 ಲಕ್ಷ ಕೈಗೆಟುಕುವ ದರದ ಮನೆಗಳ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ.
ಇದಕ್ಕಾಗಿ ಕೇಂದ್ರ 40, 597ಕೋಟಿ ರೂಪಾಯಿಗಳ ಅನುದಾನ ನೀಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.