ನವದೆಹಲಿ: ತನ್ನ ಸರ್ಕಾರದ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರನ್ನು ಭೇಟಿ ಮಾಡಿದರು.
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ಅವರು, ಕೆಲಹೊತ್ತು ಅವರೊಂದಿಗೆ ಸಮಾಲೋಚನೆ ನಡೆಸಿದರು.
ಅಲ್ಲದೇ ಎಲ್ಲಾ ಅಧಿಕಾರಿಗಳನ್ನು ಭೇಟಿಯಾಗಿ ಸಂವಾದ ನಡೆಸಿದರು. ‘ಸರ್ಕಾರದ ಅಧಿಕಾರಿಗಳು ಮತ್ತು ಸಾಮಾನ್ಯ ಜನತೆ ಒಂದೇ ರೀತಿಯಾಗಿ ಯೋಚಿಸುತ್ತಾರೆ. ಅಧಿಕಾರಿಗಳಿಗೆ ನಾವು ಸರಿಯಾದ ವಾತಾವರಣವನ್ನು ಕಲ್ಪಿಸಿದರೆ ಸಾಮಾನ್ಯ ಜನರಿಗೆ ಅವರು ಉತ್ತಮ ಕಾರ್ಯವನ್ನು ಮಾಡಲು ಸಾಧ್ಯವಾಗುತ್ತದೆ ಎಂದರು.
ಪ್ರಧಾನಿ ಸಚಿವಾಲಯದ ಅಧಿಕಾರಿಗಳ ಶ್ರಮ ಮತ್ತು ಕಾರ್ಯವೈಖರಿಯನ್ನೂ ಅವರು ಕೊಂಡಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.