ನವದೆಹಲಿ: ಜಿಎಸ್ಟಿ ಅಡಿಯಲ್ಲಿ ತೆರಿಗೆ ದರಗಳ ಹಂತವನ್ನು ತಗ್ಗಿಸುವ ಅವಕಾಶವಿದೆ ಎಂದು ವಿತ್ತಸಚಿವ ಅರುಣ್ ಜೇಟ್ಲಿ ಪುನರುಚ್ಚರಿಸಿದ್ದಾರೆ. ಒಂದು ಬಾರಿ ಆದಾಯದ ಚಲನಶೀಲತೆ ಆರಂಭವಾದರೆ ತೆರಿಗೆಯಲ್ಲಿ ಸುಧಾರಣೆ ತರುವ ಬಗ್ಗೆ ಚಿಂತನೆ ನಡೆಸಬಹುದು ಎಂದಿದ್ದಾರೆ.
’ಜಿಎಸ್ಟಿ ಅನುಷ್ಠಾನಕ್ಕೆ ಬಂದು 3 ತಿಂಗಳಷ್ಟೇ ಆಗಿದೆ, ಮುಂಬರುವ ದಿನಗಳಲ್ಲಿ ತೆರಿಗೆ ಸುಧಾರಣೆಗೆ ಸಾಕಷ್ಟು ಅವಕಾಶ, ಸಾಧ್ಯತೆಗಳು ಇವೆ. ಸಣ್ಣ ತೆರಿಗೆದಾರರ ಮೇಲಿನ ಹೊರೆಯನ್ನು ಕುಗ್ಗಿಸುವ ನಿಟ್ಟಿನಲ್ಲಿ ಸುಧಾರಣೆ ತರಬೇಕಾಗಬಹುದು’ ಎಂದಿದ್ದಾರೆ.
ಜಿಎಸ್ಟಿಯಿಂದ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರಿಗೆ ತೊಂದರೆಯಾಗುತ್ತಿದೆ ಎಂಬ ಆರೋಪದ ಬೆನ್ನಲ್ಲೇ ಜೇಟ್ಲಿ ಈ ಹೇಳಿಕೆಯನ್ನು ನೀಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.