ಬೆಂಗಳೂರು: ಭಾರೀ ಸುದ್ದಿ ಮಾಡುತ್ತಿರುವ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮಂಗಳವಾರ ವಿಧಾನಸಭೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ‘ರಾಜ್ಯದಲ್ಲಿ ಒಂದಂಕಿ ಲಾಟರಿ ದಂಧೆ ನಡೆಯುತ್ತಿದ್ದು, ಇದರಲ್ಲಿ ಯಾರು ಯಾರು ಭಾಗವಹಿಸಿದ್ದಾರೆ ಎಂಬ ಸತ್ಯ ಹೊರಬರಬೇಕಾಗಿದೆ. ಈ ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ ವಹಿಸಬೇಕಾದ ಅಗತ್ಯವಿಲ್ಲ, ಆದರೂ ಜನರಲ್ಲಿನ ಸಂಶಯಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಿಬಿಐಗೆ ವಹಿಸುತ್ತಿದ್ದೇವೆ’ ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಸೇರಿದಂತೆ ಕೆಲವರನ್ನು ಅಮಾನತು ಮಾಡಲಾಗಿದೆ. ರಾಜ್ಯಪಾಲ ವಜುಭಾಯ್ ವಾಲರೂ ಪ್ರಕರಣದ ಸಂಪೂರ್ಣ ವಿವರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.