ಬೆಂಗಳೂರು: ಯಕ್ಷಗಾನ ಲೋಕದ ಮೇರು ಪ್ರತಿಭೆ ಚಿಟ್ಟಾಣಿ ರಾಮಚಂದ್ರ ಹೆಗ್ಡೆಯವರು ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.
ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
1933ರ ಜನವರಿ 1ರಂದು ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಚಿಟ್ಟಾಣಿಯಲ್ಲಿ ಇವರು ಜನಿಸಿದ್ದರು. ಎಳವೆಯಲ್ಲೇ ಯಕ್ಷಗಾನ ರಂಗ ಪ್ರವೇಶ ಮಾಡಿದ ಇವರು ಯಕ್ಷಗಾನಕ್ಕೆ ಮೊದಲ ಪದ್ಮಶ್ರೀ ಪ್ರಶಸ್ತಿಯನ್ನು ತಂದುಕೊಟ್ಟ ಸಾಧಕರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.