ವೆಲ್ಲೋರ್: 2016ರಲ್ಲಿ ಕಾಣಿಸಿಕೊಂಡ ಭೀಕರ ಬರದಿಂದಾಗಿ ತಮಿಳುನಾಡಿನ ಕೃಷಿ ತೀವ್ರ ನಷ್ಟ ಅನುಭವಿಸಿದೆ. ಈ ಹಿನ್ನಲೆಯಲ್ಲಿ ಕಾರ್ಯಪ್ರವೃತ್ತವಾಗಿರುವ ಅಲ್ಲಿನ ಸರ್ಕಾರ ಕೃಷಿ ಉತ್ಪಾದನೆಯನ್ನು ಈ ಬಾರಿ ಹೆಚ್ಚಿಸುವ ಸಲುವಾಗಿ ಮಹತ್ವದ ಯೋಜನೆಯನ್ನು ಆರಂಭಿಸಿದೆ.
ಈ ವರ್ಷ ಬರೋಬಬ್ರಿ 125 ಲಕ್ಷ ಟನ್ ಆಹಾರ ಬೆಳೆಗಳನ್ನು ಉತ್ಪಾದಿಸುವ ಟಾರ್ಗೆಟ್ನ್ನು ಕೃಷಿ ಇಲಾಖೆ ಇಟ್ಟುಕೊಂಡಿದೆ. ನೈರುತ್ಯ ಮಾನ್ಸೂನ್ ಕೂಡ ಈ ಬಾರಿ ಪೂರಕವಾಗಿದೆ.
ಈಗಾಗಲೇ ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಇತರ ಸಂಬಂಧಿತ ಅಧಿಕಾರಿಗಳ ನಡುವೆ ಈ ನಿಟ್ಟಿನಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ.
ರೈತರ ಆದಾಯವನ್ನೂ ಹೆಚ್ಚಿಸುವ ನಿಟ್ಟಿನಲ್ಲಿ ಗಮನ ನೀಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.