ಬಾಗಲಕೋಟೆ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಸ್ಪರ್ಧಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.
ತೇರದಾಳ ಕ್ಷೇತ್ರದಿಂದ ಸ್ಪರ್ಧಿಸಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಶಿಕಾರಿಪುರ ಜನತೆ ಅಲ್ಲಿಂದಲೇ ಸ್ಪರ್ಧಿಸಿ ಎನ್ನುವ ಒತ್ತಡ ಹಾಕುತ್ತಿದ್ದಾರೆ. ಕೇವಲ ನಾಮಪತ್ರ ಸಲ್ಲಿಸಿ ರಾಜ್ಯ ಸುತ್ತಾಡಿ, ನಾವು ಆಯ್ಕೆ ಮಾಡಿ ಕಳುಹಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಶಿಕಾರಿಪುರ ಬಿಟ್ಟು ಇತರ ಕಡೆ ಸ್ಪರ್ಧಿಸುವುದು ಬೇಡ ಎಂದು ಹೇಳುತ್ತಿದ್ದಾರೆ. ಹಾಗಾಗಿ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುವ ಚಿಂತನೆ ಕೈಬಿಡಲಾಗಿದೆ. ಸ್ಪರ್ಧೆಯ ಕುರಿತು ಹೈಕಮಾಂಡ್ ಒಪ್ಪಿಸಲಾಗುವುದು. ತೇರದಾಳ ಕ್ಷೇತ್ರದಿಂದ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದು ಸವದಿ ಅವರೇ ಅಭ್ಯರ್ಥಿ ಎಂದು ಅವರು ಪ್ರಕಟಿಸಿದರು.
ನಾಳೆ ಇಲ್ಲವೆ ನಾಡಿದ್ದು ಬಿಜೆಪಿ ಮುಖಂಡ ಪುಟ್ಟಸ್ವಾಮಿ ಅವರು ಸರ್ಕಾರದ ಮಹತ್ವದ ಹಗರಣವೊಂದರ ಕುರಿತು ದಾಖಲೆಗಳನ್ನು ಬಹಿರಂಗ ಪಡಿಸಲಿದ್ದಾರೆ ಎಂದ ಅವರು ಇಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಾರ್ಜ್ ವಿರುದ್ಧ ಕೊಟ್ಟಿರುವ ದೂರನ್ನು ದಾಖಲಿಸಿಕೊಂಡು ನೋಟಿಸ್ ಜಾರಿಗೊಳಿಸುವ ಸಿದ್ಧತೆಯಲ್ಲಿದೆ ಎಂದರು.
ರಾಜ್ಯದ ರೈತರ 50 ಸಾವಿರ ರೂ. ಸಾಲ ಮನ್ನಾ ಮಾಡಿರುವುದಾಗಿ ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದುವರೆಗೂ ಒಂದು ನೈಯೆ ಪೈಸೆಯನ್ನೂ ಸಹಕಾರಿ ಸಂಘಗಳಿಗೆ ಜಮೆ ಮಾಡಿಲ್ಲ. ಇದರಿಂದಾಗಿ ರೈತರಿಗೆ ಹೊಸತಾಗಿ ಸಾಲ ಸಿಕ್ಕುತ್ತಿಲ್ಲ. ರೈತರು ಬೀದಿ ಪಾಲಾಗಿದ್ದಾರೆ ಎಂದು ಅವರು ದೂರಿದರು.
ಗೋವಿಂದ ಕಾರಜೋಳ, ಈಶ್ವರಪ್ಪ, ಶೋಭಾ ಕರಂದ್ಲಾಜೆ, ವೀರಣ್ಣ ಚರಂತಿಮಠ, ಮಾಜಿ ಸಚಿವ ಮುರಗೇಶ ನಿರಾಣಿ ಇತರರು ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.