ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ಬುಧವಾರ ಎಎಪಿ ನಾಯಕರುಗಳು ಮತ್ತು ಕಾರ್ಯಕರ್ತರು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅಧಿಕಾರಗಳ ಪರವಾಗಿ ಗೃಹಸಚಿವಾಲಯ ಅಧಿಸೂಚನೆ ಹೊರಡಿಸಿರುವುದನ್ನು ವಿರೋಧಿಸಿ ಎಎಪಿ ಪ್ರತಿಭಟನೆ ನಡೆಸುತ್ತಿದೆ.
ಇನ್ನೊಂದೆಡೆ ಕೇಂದ್ರದ ಅಧಿಸೂಚನೆಯ ಬಗ್ಗೆ ಚರ್ಚೆ ನಡೆಸಲು ಎಎಪಿ ಸರ್ಕಾರ ಮಂಗಳವಾರದಿಂದ ತುರ್ತು ಅಧಿವೇಶನವನ್ನು ನಡೆಸುತ್ತಿದೆ. ಅಧಿವೇಶನದ ಎರಡನೇ ದಿನವಾದ ಇಂದು ಗೃಹ ಇಲಾಖೆಯ ಅಧಿಸೂಚನೆಯ ವಿರುದ್ಧ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮೇ.21ರಂದು ಕೇಂದ್ರ ಗೃಹ ಇಲಾಖೆ ಅಧಿಕಾರಿಗಳನ್ನು ನಿಯೋಜಿಸುವ ಮತ್ತು ವರ್ಗಾವಣೆಗೊಳಿಸುವ ಅಧಿಕಾರ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಇದೆ ಎಂದು ಅಧಿಸೂಚನೆ ಹೊರಡಿಸಿತ್ತು.
ಇದು ಎಎಪಿ ಕೆಂಗಣ್ಣಿಗೆ ಗುರಿಯಾಗಿದ್ದು, ಲೆ.ಗವರ್ನರ್ ಮೂಲಕ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.