ನವದೆಹಲಿ: ಕೆಲವೊಂದು ಬ್ಯಾಂಕುಗಳನ್ನು ವಿಲೀನಗೊಳಿಸುವ ಮೂಲಕ ಸಾರ್ವಜನಿಕ ವಲಯದ ಬ್ಯಾಂಕುಗಳ ಸಂಖ್ಯೆಯನ್ನು ಕಡಿಮೆ ಮಾಡಲು ವಿತ್ತ ಸಚಿವಾಲಯ ಮುಂದಾಗಿದೆ ಎಂದು ಸಚಿವಾಲಯದ ಪ್ರಧಾನ ಹಣಕಾಸು ಸಲಹೆಗಾರ ಸಂಜೀವ್ ಸಂಯ್ಯಲ್ ತಿಳಿಸಿದ್ದಾರೆ.
ಲೋನ್ ಸಮಸ್ಯೆಗಳು ಬಗೆಹರಿದ ಬಳಿಕ ವಿಲೀನ ಕಾರ್ಯಗಳ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದಿರುವ ಅವರು, ದೇಶದಲ್ಲಿ ಪ್ರಸ್ತುತ 21 ಸಾರ್ವಜನಿಕ ವಲಯದ ಬ್ಯಾಂಕುಗಳಿವೆ, ಈ ಸಂಖ್ಯೆ 10-15ಕ್ಕೆ ಇಳಿಯಲಿದೆ ಎಂದಿದ್ದಾರೆ.
ಪ್ರಾದೇಶಿಕ ಸಮತೋಲನ, ಭೌಗೋಳಿಕ ವ್ಯಾಪ್ತಿ, ಹಣಕಾಸಿನ ಹೊರೆ, ಮೆದು ಮಾನವ ಸಂಪನ್ಮೂಲ ವರ್ಗಾವಣೆ ಮುಂತಾದ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ವಿಲೀನ ಪ್ರಕ್ರಿಯೆ ನಡೆಯಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.