ನವದೆಹಲಿ: ನನ್ನನ್ನು ಅಥವಾ ನನ್ನ ಕುಟುಂಬವನ್ನು ಶ್ರೀಮಂತಗೊಳಿಸುವುದಕ್ಕಾಗಿ ನಾನು ನನ್ನ ಕಛೇರಿಯನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ನಮ್ಮದು ಭ್ರಷ್ಟ ಸರ್ಕಾರ ಎಂದು ಬಿಜೆಪಿ ಆರೋಪಿಸುತ್ತಿದೆ, ಆದರೆ ಅದು ನಿಜವಲ್ಲ, ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಹೋರಾಡುವ ಭರವಸೆಯನ್ನು ನಾವು ನೀಡುತ್ತೇವೆ ಎಂದಿದ್ದಾರೆ.
ಅಲ್ಲದೇ ಭಾರತದ ಪ್ರಜಾಪ್ರಭುತ್ವ ಈಗ ಅಪಾಯದಲ್ಲಿದೆ, ಯುಪಿಎ ಭಾರತವನ್ನು ಸಮೃದ್ಧವಾಗುವಂತೆ ಮಾಡಿತ್ತು ಆದರೆ ಇದೀಗ ಸಿದ್ಧಾಂತಗಳು ಅಪಾಯದಲ್ಲಿದೆ ಎಂದಿದ್ದಾರೆ.
2ಜಿ ಹಗರಣದ ಬಗ್ಗೆ ಮನಮೋಹನ್ ಸಿಂಗ್ ಅವರಿಗೆ ಎಲ್ಲವೂ ಗೊತ್ತಿತ್ತು, ಅದರ ವಿರುದ್ಧ ಕ್ರಮಕೈಗೊಳ್ಳದಂತೆ ಅವರು ನನಗೆ ಎಚ್ಚರಿಕೆ ನೀಡಿದ್ದರು ಎಂದು ಟ್ರಾಯ್ನ ಮಾಜಿ ಅಧ್ಯಕ್ಷ ಪ್ರದೀಪ್ ಬಾಯ್ಜಲ್ ಆರೋಪಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.