ಪಾಟ್ನಾ: ಸರ್ಕಾರಿ ಉದ್ಯೋಗ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ದಿವ್ಯಾಂಗ ಜನರಿಗೆ ಮೀಸಲಾತಿಯನ್ನು ನೀಡಲು ಬಿಹಾರ ಸಂಪುಟ ಅನುಮೋದನೆಯನ್ನು ನೀಡಿದೆ.
ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆಸಲಾದ ಸಭೆಯಲ್ಲಿ ಈ ಬಗ್ಗೆ ಅನುಮೋದನೆಯನ್ನು ನೀಡಲಾಯಿತು ಎಂದು ಅಲ್ಲಿನ ಸಂಪುಟ ಕಾರ್ಯದರ್ಶಿ ಉಪೇಂದ್ರ ನಾಥ್ ಪಾಂಡೆ ತಿಳಿಸಿದ್ದಾರೆ.
ವಿಕಲಚೇತನ ಕಾಯ್ದೆ 2016ರ ಅಡಿಯಲ್ಲಿ ಈ ನಿಯಮವನ್ನು ಜಾರಿಗೊಳಿಸಲಾಯಿತು ಎಂದು ತಿಳಿಸಿದ್ದಾರೆ.
ದಿವ್ಯಾಂಗರ ಕಲ್ಯಾಣಕ್ಕಾಗಿ ರಾಜ್ಯ ಸಲಹಾ ಸಮಿತಿಯನ್ನೂ ಸ್ಥಾಪಿಸಲು ಸಂಪುಟದಲ್ಲಿ ಅನುಮೋದನೆಯನ್ನು ನೀಡಲಾಗಿದೆ. ವಿಧಾನಸಭೆಯ ಇಬ್ಬರು ಸದಸ್ಯರು ಮತ್ತು ವಿಧಾನ ಪರಿಷತ್ ಮಂಡಳಿಯ ಇಬ್ಬರು ಇದರ ಸದಸ್ಯರಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.