ಅಗರ್ತಲ: ತನ್ನ ರಾಜ್ಯದಲ್ಲಿರುವ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ಹಿಂಪಡೆಯಲು ತ್ರಿಪುರ ಸರ್ಕಾರ ನಿರ್ಧರಿಸಿದೆ.
ಕಳೆದ 18ವರ್ಷಗಳಿಂದ ಬಂಡುಕೋರರನ್ನು ಹತ್ತಿಕ್ಕುವ ಸಲುವಾಗಿ ಈ ವಿವಾದಾತ್ಮಕ ಕಾಯ್ದೆಯನ್ನು ತ್ರಿಪುರದಲ್ಲಿ ಹೇರಲಾಗಿತ್ತು.
ಇದೀಗ ಈ ಕಾಯ್ದೆಯನ್ನು ಹಿಂಪಡೆಯಲು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಹಾಗೂ ಗೃಹಖಾತೆಯನ್ನೂ ಹೊಂದಿರುವ ಮನಿಕ್ ಸರ್ಕಾರ್ ತಿಳಿಸಿದ್ದಾರೆ.
‘ಸಮಸ್ಯೆಯಿರುವ ಪ್ರದೇಶಗಳ ಸ್ಥಿತಿಗತಿಯನ್ನು ಅವಲೋಕನ ಮಾಡಿದ್ದೇವೆ, ರಾಜ್ಯ ಪೊಲೀಸ್ ಮತ್ತು ಇತರ ಭದ್ರತಾ ಪಡೆಗಳೊಂದಿಗೆ ಈ ಬಗ್ಗೆ ಸಮಾಲೋಚನೆ ಮಾಡಿದ್ದೇವೆ’ ಎಂದು ತಿಳಿಸಿದ್ದಾರೆ.
ಉಗ್ರವಾದಿಗಳನ್ನು ಹತ್ತಿಕ್ಕಲು 1997ರ ಫೆ.16ರಂದು ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ತ್ರಿಪುರದಲ್ಲಿ ಹೇರಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.