ಲಕ್ನೋ: ಅಮೆರಿಕಾದ 26 ಪ್ರಮುಖ ಕಂಪನಿಗಳ ಪ್ರತಿನಿಧಿಗಳು ಸೋಮವಾರ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಭೇಟಿಯಾಗಲಿದ್ದು, ಬಂಡವಾಳ ಹೂಡಿಕೆಯ ಅವಕಾಶಗಳ ಬಗ್ಗೆ ಮಾತುಕತೆಗಳು ನಡೆಯಲಿವೆ.
‘ಯುಪಿಯಲ್ಲಿ ಯುಎಸ್’ ಎಂಬ ಟ್ಯಾಗ್ಲೈನ್ನೊಂದಿಗೆ ಈ ಭೇಟಿ ನಡೆಯುತ್ತಿದ್ದು, ಬೋಯಿಂಗ್ ನೇತೃತ್ವದ 26 ಯುಎಸ್ ಸಂಸ್ಥೆಗಳು ಇದರಲ್ಲಿ ಪಾಲ್ಗೊಳ್ಳಲಿವೆ. ಯುಪಿಯಲ್ಲಿ ಹೂಡಿಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸಲಿವೆ.
ಯುಎಸ್-ಇಂಡಿಯಾ ಪಾಟ್ನರ್ಶಿಪ್ ಫೋರಂನಡಿಯಲ್ಲಿ ಅಮೆರಿಕಾ ಸಂಸ್ಥೆಗಳು ಯುಪಿಗೆ ಭೇಟಿ ಕೊಡಲಿವೆ. ಉಭಯ ದೇಶಗಳ ನಡುವಣ ದ್ವಿಪಕ್ಷೀಯ ವ್ಯಾಪಾರವನ್ನು ವೃದ್ಧಿಸುವುದೇ ಈ ಫೋರಂನ ಪ್ರಮುಖ ಉದ್ದೇಶವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.