ನವದೆಹಲಿ: ರೈಲ್ವೇ ಪ್ರಯಾಣಿಕರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಅತ್ಯುತ್ತಮವಾದ ಕಾರ್ಯವನ್ನು ಮಾಡಿದ್ದಾರೆ. ಸ್ವತಃ ರೈಲಿನಲ್ಲಿ ಪ್ರಯಾಣಿಸಿ ಪ್ರಯಾಣಿಕರೊಂದಿಗೆ ಸಂಭಾಷಣೆ ನಡೆಸಿದ್ದಾರೆ.
ಕೋಟಾ ಜನ್ ಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಸಂಚರಿಸಿದ ಅವರು ಸೆಕೆಂಡ್ ಕ್ಲಾಸ್ ಕೋಚ್ನ್ನು ಪರಿಶೀಲಿಸಿದರು ಮತ್ತು ಜನರಿಂದ ಪ್ರತಿಕ್ರಿಯೆಗಳನ್ನು ಪಡೆದುಕೊಂಡರು. ಬಳಿಕ ದೆಹಲಿಯ ಹಝ್ರತ್ ನಿಜಾಮುದ್ದೀನ್ ಸ್ಟೇಶನ್ನಿನಲ್ಲಿ ಇಳಿಯುವಾಗಲೂ ನಿಲ್ದಾಣದಲ್ಲಿದ್ದ ಜನರೊಂದಿಗೆ ಮಾತುಕತೆ ನಡೆಸಿದರು.
ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆ, ಕೊರತೆ ಮತ್ತು ಅವರಿಗೆ ಬೇಕಾದ ಸೌಲಭ್ಯಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.