ಪಲಯಂಕೊಟ್ಟೈ: ತಮಿಳುನಾಡಿನ ಪಲಯಂಕೊಟ್ಟೈನಲ್ಲಿ ನಿರ್ಮಾಣ ಹಂತದಲ್ಲಿದ್ದ ಚರ್ಚ್ವೊಂದರ ಸೀಲಿಂಗ್ ಕುಸಿದು ಬಿದ್ದ ಪರಿಣಾಮ 3 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.
ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದು, 3 ಮೃತದೇಹಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಈಗಲೂ ಮುಂದುವರೆದಿದೆ.
ಘಟನೆಯಲ್ಲಿ12 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳಪೆ ಗುಣಮಟ್ಟದ ಸಾಮಾಗ್ರಿಗಳನ್ನು ಬಳಸಿ ಚರ್ಚ್ ನಿರ್ಮಾಣ ಮಾಡಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.