ನವದೆಹಲಿ: ಮೊಬೈಲ್ ಸಿಮ್ಕಾರ್ಡ್ಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಇದೀಗ ಈ ಪ್ರಕ್ರಿಯೆಯನ್ನು ಸರಳಗೊಳಿಸುವ ಸಲುವಾಗಿ ಒಟಿಪಿ, ಆ್ಯಪ್, ಐವಿಆರ್ಎಸ್ಗಳ ಮೂಲಕ ಲಿಂಕ್ ಪ್ರಕ್ರಿಯೆಗೆ ಅವಕಾಶ ಕಲ್ಪಿಸಿದೆ.
ಮೊಬೈಲ್ ಬಳಕೆದಾರರು ಒಟಿಪಿ ಆಧರಿತ ಆಯ್ಕೆ ಬಳಸಿಕೊಂಡು ಆಧಾರ್ ಸಂಖ್ಯೆಯನ್ನು ಒದಗಿಸಬಹುದಾಗಿದೆ. ಮಾತ್ರವಲ್ಲದೇ, ಮೊಬೈಲ್ ಕಂಪನಿಗಳ ಆಪ್ಗಳಿಗೆ ಲಾಗ್ ಇನ್ ಆಗಿ ಮೊಬೈಲ್ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬಹುದಾಗಿದೆ. ಶೀಘ್ರದಲ್ಲೇ ಈ ಸೇವೆಯನ್ನು ಟೆಲಿಕಾಂ ಸರ್ವಿಸ್ ಸಂಸ್ಥೆಗಳು ಆರಂಭಿಸಲಿವೆ.
ಇಂಟರ್ಯಾಕ್ಟಿವ್ ವಾಯ್ಸ್ ರೆಸ್ಪಾನ್ಸ್ ಸಿಸ್ಟಮ್(ಐವಿಆರ್ಎಸ್) ಮೂಲಕವೂ ಮೊಬೈಲ್ ಸಂಖ್ಯೆಗೆ ಆಧಾರ್ ಲಿಂಕ್ ಮಾಡಬಹುದು.
2018ರ ಮಾರ್ಚ್ 31ರವರೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ಗಡುವು ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.