ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಆದಿ ಶಂಕರಾಚಾರ್ಯರ ರಚನೆಯ ಸೌಂದರ್ಯ ಲಹರಿ ಮತ್ತು ದಕ್ಷಿಣಾಮೂರ್ತಿ ಅಷ್ಟಕಗಳ ಸಾಮೂಹಿಕ ಪಾರಾಯಣೋತ್ಸವ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಅರಮನೆ ಮೈದಾನದಲ್ಲಿ ಇಂದಿನಿಂದ ಎರಡು ದಿನ ಈ ಕಾರ್ಯಕ್ರಮ ನೆರವೇರಲಿದ್ದು, ಪ್ರಧಾನಿಗಳು ನಾಳೆ ಸುಮಾರು 40 ನಿಮಿಷಗಳ ಕಾಲ ಪಾರಯಣದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವೇದಾಂತ ಭಾರತಿ ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಇದರಲ್ಲಿ ಸುಮಾರು 80 ಸಾವಿರ ಮಂದಿ ಭಾಗವಹಿಸಿ ಪಾರಾಯಣ ಮಾಡಲಿದ್ದಾರೆ ಎನ್ನಲಾಗಿದೆ.
ಪ್ರಧಾನಿಗಳು ಭಾಗವಹಿಸುವುದರಿಂದ ಭದ್ರತಾ ಸರ್ಪಗಾವಲನ್ನು ಏರ್ಪಡಿಸಲಾಗುತ್ತಿದ್ದು, 2 ಸಾವಿರ ಪೊಲೀಸರನ್ನು ನಿಯೋಜನೆಗೊಳಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.