ನವದೆಹಲಿ: ರೈಲ್ವೇ ಮುಂದಿನ 5 ವರ್ಷಗಳಲ್ಲಿ ಸುಮಾರು 150 ಬಿಲಿಯನ್ ಡಾಲರ್ ಹೂಡಿಕೆ ಮಾಡುವ ನಿರೀಕ್ಷೆಯಲ್ಲಿದೆ, ಇದರಿಂದಾಗಿ ಸಾಕಷ್ಟು ಉದ್ಯೋಗವಕಾಶಗಳು ಸೃಷ್ಟಿಯಾಗಲಿದೆ ಎಂದು ರೈಲ್ವೇ ಸಚಿವ ಪಿಯೂಶ್ ಗೋಯಲ್ ತಿಳಿಸಿದ್ದಾರೆ.
ರಾಷ್ಟ್ರೀಯ ಸಾರಿಗೆಯಾದ ರೈಲ್ವೇಗೆ ಹೊಸ ಆಯಾಮವನ್ನು ನೀಡಲು ತಾನು ಪ್ರಯತ್ನಿಸುತ್ತಿರುವುದಾಗಿ ಹೇಳಿರುವ ಅವರು, ಸುರಕ್ಷಿತ, ಆರಾಮದಾಯಕ ಪ್ರಯಾಣವನ್ನು ಒದಗಿಸುವ ಸರ್ಕಾರದ ಅಜೆಂಡಾದಲ್ಲಿ ರೈಲ್ವೇ ಮಹತ್ವದ ಪಾತ್ರ ನಿಭಾಯಿಸಲಿದೆ ಎಂದಿದ್ದಾರೆ.
ಮೂಲ ಸೌಕರ್ಯಯತ್ತ ಹೆಚ್ಚಿನ ಗಮನವಹಿಸುವುದರಿಂದಲೂ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಗಳು ಇವೆ ಎಂದಿದ್ದಾರೆ.
ರೈಲ್ವೇ ಲೈನ್ಗಳನ್ನು ವಿದ್ಯುದೀಕರಣಗೊಳಿಸುವ ಕಾಮಗಾರಿಯನ್ನು ಹಿಂದೆ ನಿಗದಿಸಲ್ಪಟ್ಟ 10 ವರ್ಷದ ಬದಲಾಗಿ 4 ವರ್ಷದಲ್ಲಿ ಪೂರ್ಣಗೊಳಿಸಲಿದ್ದೇವೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.