ನವದೆಹಲಿ: ಹಿಮಾಚಲ ಪ್ರದೇಶದ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪ್ರೇಮ್ ಕುಮಾರ್ ಧುಮಲ್ ಅವರನ್ನು ಆಯ್ಕೆ ಮಾಡಲಾಗಿದೆ.
73 ವರ್ಷದ ಧುಮಲ್ ಅವರು 1998-2003 ಮತ್ತು 2008 ಜನವರಿಯಿಂದ 2012 ಡಿಸೆಂಬರ್ವರೆಗೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು.
ಮಂಗಳವಾರ ಹಿಮಾಚಲದ ಕಂಗ್ರಾದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಧುಮಲ್ ಅವರು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.
ಡಿಸೆಂಬರ್ ತಿಂಗಳಲ್ಲಿ ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆಯನ್ನು ಎದುರಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.