ನವದೆಹಲಿ: ಮತ್ತಷ್ಟು ಉತ್ತನ್ನಗಳನ್ನು ಜಿಎಸ್ಟಿಯ ಶೇ.28ರಷ್ಟು ತೆರಿಗೆ ವ್ಯಾಪ್ತಿಯಿಂದ ಹೊರಗಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಲ್ಲದೇ ನಿರಂತರವಾಗಿ ಬಳಕೆಯಲ್ಲಿರುವ ವಸ್ತುಗಳ ತೆರಿಗೆ ದರವನ್ನು ಕಡಿತಗೊಳಿಸಲು ಮುಂದಾಗಿದೆ.
ಇಂತಹ ಉತ್ಪನ್ನಗಳ ಪಟ್ಟಿಯನ್ನು ಜಿಎಸ್ಟಿ ಸಿದ್ಧಪಡಿಸುತ್ತಿದ್ದು, ಇದರಿಂದಾಗಿ ಗ್ರಾಹಕರ ಬೇಡಿಕೆಯಲ್ಲಿ ಪ್ರಗತಿ ಕಾಣುವ ನಿರೀಕ್ಷೆ ಇದೆ.
ಸಣ್ಣ ಮತ್ತು ಮಧ್ಯಮ ಉದ್ಯಮಗಳು ತಯಾರಿಸಿದ ವಸ್ತುಗಳು ಹೆಚ್ಚಿನ ತೆರಿಗೆಗೆ ಒಳಪಟ್ಟಿದೆ. ಇದರಿಂದ ಉದ್ಯಮಗಳ ಮೇಲೆ ಒತ್ತಡ ಬಿದ್ದಿದೆ. ಹೀಗಾಗೀ ಮರುಶೀಲನೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬರುವ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಈ ವಸ್ತುಗಳ ಪಟ್ಟಿ ಹೊರ ಬೀಳುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.