ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ತಪ್ಪಿತಸ್ಥ ಸಂಸದ ಮತ್ತು ಶಾಸಕರಿಗೆ ಚುನಾವಣೆ ಸ್ಪರ್ಧಿಸುವುದಕ್ಕೆ ಜೀವನ ಪರ್ಯಂತ ನಿರ್ಬಂಧ ಹೇರಬೇಕು ಎಂಬ ಮನವಿಯನ್ನು ಕೇಂದ್ರ ಚುನಾವಣಾ ಆಯೋಗ ಸುಪ್ರೀಂಕೋರ್ಟ್ಗೆ ಸಲ್ಲಿಸಿದೆ.
ಬಿಜೆಪಿ ನಾಯಕ ಅಶ್ವನಿ ಉಪಧ್ಯಾಯ ಎಂಬುವವರು ತಪ್ಪಿತಸ್ಥ ಜನಪ್ರತಿನಿಧಿಗಳಿಗೆ ನಿರ್ಬಂಧ ಹೇರುವಂತೆ ಕೋರಿ ಪಿಐಎಲ್ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಸುಪ್ರೀಂ ಈ ಬಗ್ಗೆ ಚುನಾವಣಾ ಆಯೋಗದ ನಿಲುವು ತಿಳಿಸುವಂತೆ ಸೂಚಿಸಿತ್ತು.
ಇದೀಗ ತಡವಾಗಿಯಾದರೂ ಚುನಾವಣಾ ಆಯೋಗ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ತಪ್ಪಿತಸ್ಥ, ಅಪರಾಧ ಎಸಗಿದ ಶಾಸಕ ಮತ್ತು ಸಂಸದರು ಚುನಾವಣೆಗೆ ಸ್ಪರ್ಧಿಸುವುದಕ್ಕೆ ನಿಷೇಧ ಹೇರುವುದಾಗಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.