ನವದೆಹಲಿ: ಕೇರಳದಲ್ಲಿ ಮೂಲಭೂತೀಕರಣ ಹೆಚ್ಚುತ್ತಿದ್ದು, ಇದು ರಾಷ್ಟ್ರೀಯ ಭದ್ರತೆಗೆ ದೊಡ್ಡ ಆತಂಕವಾಗಿದೆ ಎಂದು ಕೇಂದ್ರ ರವಿಶಂಕರ್ ಪ್ರಸಾದ್ ಕಳವಳ ವ್ಯಕ್ತಪಡಿಸಿದ್ದಾರೆ.
‘ನಂಬಿಕೆಯ ಹೆಸರಲ್ಲಿ ರಾಷ್ಟ್ರೀಯ ಹಿತಾಸಕ್ತಿಯನ್ನು ಕಡೆಗಣಿಸಬಾರದು, ‘ಲವ್ ಜಿಹಾದ್’ ಯುವಜನತೆಯನ್ನು ಉಗ್ರವಾದದತ್ತ ಸೆಳೆಯುವ ಒಂದು ಭಾಗವಾಗಿದೆ. ಎಡ ಪಕ್ಷಗಳ ವೋಟ್ ಬ್ಯಾಂಕಿಗಾಗಿ ಭಯೋತ್ಪಾದನೆ, ರಾಷ್ಟ್ರೀಯ ಭದ್ರತೆಯಂತಹ ವಿಷಯಗಳು ಕಡೆಗಣಿಸಲ್ಪಡುತ್ತಿವೆ’ ಎಂದಿದ್ದಾರೆ.
ಕೇರಳದಲ್ಲಿ ಮತೀಯ ಕೃತ್ಯಗಳು ನಡೆಯುತ್ತಿರುವ ಬಗ್ಗೆ, ಪಿಎಫ್ಐ ಪಾತ್ರದ ಬಗ್ಗೆ ಮಾಧ್ಯಮಗಳು ಸಾಕಷ್ಟು ವರದಿ ಮಾಡಿವೆ ಎಂದಿದ್ದಾರೆ.
ಕೇರಳದಲ್ಲಿ ಉಗ್ರವಾದ ಕೃತ್ಯಗಳು ಹೆಚ್ಚಾಗುತ್ತಿದ್ದು, ಅಲ್ಲಿ ಕಾನೂನು ಬಾಹಿರ ಕೃತ್ಯ ಕಡೆ ಕಾಯ್ದೆ ಉಲ್ಲಂಘನೆಯಾಗುತ್ತಿರುವ ಬಗ್ಗೆಯೂ ತಳ್ಳಿ ಹಾಕಲು ಸಾಧ್ಯವಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.