ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 25ನೇ ಇಂಡಿಯಾ-ಏಷಿಯಾನ್ ಸಮಿತ್ನಲ್ಲಿ ಭಾಗವಹಿಸುವ ಸಲುವಾಗಿ ನವೆಂಬರ್.12ರಿಂದ ಫಿಲಿಫೈನ್ಸ್ ಪ್ರವಾಸ ಕೈಗೊಳ್ಳಲಿದ್ದಾರೆ.
36 ವರ್ಷಗಳ ಬಳಿಕ ಭಾರತೀಯ ಪ್ರಧಾನಿಯೊಬ್ಬರು ಫಿಲಿಫೈನ್ಸ್ಗೆ ಭೇಟಿ ನೀಡುತ್ತಿದ್ದಾರೆ. ಈ ಮೊದಲು 1981ರಲ್ಲಿ ಇಂದಿರಾ ಗಾಂಧಿ ಅಲ್ಲಿಗೆ ಭೇಟಿಕೊಟ್ಟಿದ್ದರು.
ಅಮೆರಿಕಾದ ಸಾಂಪ್ರದಾಯಿಕ ಮೈತ್ರಿ ಆಗಿರುವ ಫಿಲಿಫೈನ್ಸ್ನೊಂದಿಗೆ ಸಂಬಂಧ ಬೆಳೆಸಲು ಚೀನಾ ಅತೀ ಉತ್ಸುಹುಕವಾಗಿರುವ ಸಮಯದಲ್ಲಿ ಭಾರತದ ಪ್ರಧಾನಿ ಅಲ್ಲಿಗೆ ಭೇಟಿಕೊಡುತ್ತಿದ್ದಾರೆ.
ಇದೀಗ ಫಿಲಿಫೈನ್ಸ್ನೊಂದಿಗೆ ಪಾಲುದಾರಿಕೆಯನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯೊಂದಿಗೆ ಮೋದಿ ಆ ರಾಷ್ಟ್ರಕ್ಕೆ ಭೇಟಿಕೊಡುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.