ನವದೆಹಲಿ: ಸ್ಟ್ಯಾಂಪ್ ಸಂಗ್ರಹಣಾ ಹವ್ಯಾಸವುಳ್ಳ ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸ್ಕಾಲರ್ಶಿಪ್ ನೀಡಲು ಮುಂದಾಗಿದೆ. ಇದರಿಂದ ಅವರ ಹವ್ಯಾಸಕ್ಕೆ ಉತ್ತೇಜನ ದೊರಕಲಿದೆ.
ಅಂಚೆ ಚೀಟಿಗಳನ್ನು ಸಂಗ್ರಹಿಸುವುದು, ಅವುಗಳನ್ನು ಅಧ್ಯಯನ, ಸಂಶೋಧನೆ ಮಾಡುವ ಮಕ್ಕಳಿಗೆ ಪ್ರೋತ್ಸಾಹವನ್ನು ನೀಡುವ ಸಲುವಾಗಿ ಸ್ಕಾಲರ್ಶಿಪ್ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ.
ಈ ಸ್ಕಾಲರ್ಶಿಪ್ ಕಾರ್ಯಕ್ರಮಕ್ಕೆ ‘ದೀನ್ ದಯಾಳ್ ಸ್ಪರ್ಶ್ ಯೋಜನಾ’ ಎಂದು ಹೆಸರಿಸಲಾಗಿದೆ.
ಈ ಯೋಜನೆಯಡಿ 6ರಿಂದ 9ನೇ ತರಗತಿಯೊಳಗಿನ ಅತ್ಯುತ್ತಮ ಶೈಕ್ಷಣಿಕ ಪ್ರದರ್ಶನ ನೀಡುವುದರೊಂದಿಗೆ ಸ್ಟ್ಯಾಂಪ್ ಕಲೆಕ್ಷನ್ ಹವ್ಯಾಸ ಹೊಂದಿರುವ ಸಮಕ್ಕಳಿಗೆ ವಾರ್ಷಿಕ ಸ್ಕಾಲರ್ಶಿಪ್ ನೀಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.