ತಿರುವನಂತಪುರಂ: ರಸ್ತೆ ಅಪಘಾತಕ್ಕೊಳಗಾದ ಸಂತ್ರಸ್ಥರಿಗೆ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಎರಡು ದಿನಗಳ ಕಾಲ ಉಚಿತವಾಗಿ ಚಿಕಿತ್ಸೆಯನ್ನು ನೀಡಬೇಕು ಎಂಬ ನಿಯಮವನ್ನು ಜಾರಿಗೊಳಿಸಲು ಕೇರಳ ಮುಂದಾಗಿದೆ.
ಪಿನರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗೆಗಿನ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.
ಅಪಘಾತಕ್ಕೊಳಗಾದ ಸಂತ್ರಸ್ಥರಿಗೆ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂಬ ವರದಿಗಳು ಬರುತ್ತಿರುವ ಹಿನ್ನಲೆಯಲ್ಲಿ ಈ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ.
ಈ ನಿಯಮ ಜಾರಿಯಾದ ಬಳಿಕ ಅಪಘಾತಕ್ಕೊಳಗಾದ ವ್ಯಕ್ತಿಗೆ 42 ಗಂಟೆಗಳ ಕಾಲ ಎಲ್ಲಾ ಆಸ್ಪತ್ರೆಗಳು ಉಚಿತವಾಗಿ ಚಿಕಿತ್ಸೆ ನೀಡುವುದು ಕಡ್ಡಾಯ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.