ಬೆಂಗಳೂರು: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಮನೆ ಮೇಲೆ ನಿನ್ನೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ರೇಣುಕಾಚಾರ್ಯ ಮತ್ತು ಅವರ ಸಂಬಂಧಿಕರ ವಿವಿಧ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಲಕ್ಷಾಂತರ ಚಿನ್ನಾಭರಣ, ನಗದು, ವಾಹನ ಸೇರಿದಂತೆ ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು, ದಾವರಣಗೆರೆ, ಹೊನ್ನಾಲಿಯಲ್ಲಿನ ಅವರ ಮತ್ತು ಅವರ ಸಂಬಂಧಿಕರ ಒಟ್ಟು ಆರು ಮನೆ ಮೇಲೆ ದಾಳಿಯಾಗಿದೆ, ಅವರಿಗೆ ಸೇರಿದ ಬಾಪೂಜಿ ಆಯುರ್ವೇದಿಕ್ ವಿದ್ಯಾಸಂಸ್ಥೆ ಮೇಲೂ ದಾಳಿ ನಡೆಸಲಾಗಿದೆ.
ದಾಳಿಯ ವೇಳೆ 3 ಲಕ್ಷ ನಗದು, ನಾಲ್ಕು ಕಾರು, 2500 ಸೀರೆ, 70 ಗೋಡೆ ಗಡಿಯಾರ,150 ಟೀ ಶರ್ಟ್, ಟ್ರ್ಯಾಕ್ಟರ್, ಜೆಸಿಬಿ, ಕಟ್ಟಡ, ಜಾಮೀನುಗಳಿಗೆ ಸಂಬಂಧಿಸಿದ ಹಲವಾರು ದಾಖಲೆಗಳನ್ನು ವಶಪಡಿಸಕೊಳ್ಳಲಾಗಿದೆ ಎನ್ನಲಾಗಿದೆ.
ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ದೂರಿನ ಮೇರೆಗೆ ಅವರ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ, ಆದರೆ ಇದೊಂದು ರಾಜಕೀಯ ಪ್ರೇರಿತ ಸಂಚು ಎಂದು ರೇಣುಕಾಚಾರ್ಯ ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.