ಚೆನ್ನೈ: ಕರಪತ್ರಗಳನ್ನು ಹಂಚಿ, ಪೋಸ್ಟರ್ ಹಾಕುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ದ್ವೇಷದ ಪ್ರಚಾರ ಮಾಡುತ್ತಿದ್ದ ವಿದ್ಯಾರ್ಥಿ ಸಂಘಟನೆಯೊಂದರ ವಿರುದ್ಧ ಐಐಟಿ ಮದ್ರಾಸ್ ಕಠಿಣ ಕ್ರಮವನ್ನು ಕೈಗೊಂಡಿದೆ.
ಮೋದಿ ವಿರುದ್ಧದ ಪ್ರಚಾರದ ಬಗ್ಗೆ ಅನಾಮಧೇಯ ದೂರೊಂದು ಕೇಂದ್ರ ಸರ್ಕಾರಕ್ಕೆ ರವಾನೆಯಾಗಿತ್ತು, ಈ ಹಿನ್ನಲೆಯಲ್ಲಿ ಎಚ್ಆರ್ಡಿ ಸಚಿವಾಲಯ ಐಐಟಿಗೆ ಮಾಹಿತಿ ನೀಡಿತ್ತು ಎನ್ನಲಾಗಿದೆ.
ಅಂಬೇಡ್ಕರ್ ಪೆರಿಯಾರ್ ಸ್ಟಡಿ ಸರ್ಕಲ್ ವಿರುದ್ಧ ಕ್ರಮಕೈಗೊಳ್ಳಲಾಗಿದೆ, ಈ ಸಂಘಟನೆ ಮೋದಿ ಮತ್ತು ಹಿಂದೂ ಧರ್ಮದ ವಿರುದ್ಧ ಪ್ರಚಾರ ನಡೆಸುತ್ತಿದ್ದ ಆರೋಪ ಹೊತ್ತಿದೆ. ಇದೀಗ ಐಐಟಿ ಈ ಸಂಘಟನೆಯ ಮೇಲೆ ನಿಷೇಧವನ್ನೂ ಹೇರಿದೆ.
ಐಐಟಿ ಇಮೇಲ್, ಅಡಿಟೋರಿಯಂ ಮತ್ತು ನೊಟಿಸ್ ಬೋರ್ಡ್ನ್ನು ಸರ್ಕಾರದ ವಿರುದ್ಧದ ಪ್ರಚಾರಕ್ಕೆ ಬಳಸದಂತೆ ಈ ಸಂಘಟನೆಗೆ ಐಐಟಿ ಸೂಚಿಸಿತ್ತು ಎನ್ನಲಾಗಿದೆ.
ಆದರೆ ನಾವು ಯಾವುದೇ ತಪ್ಪು ಮಾಡಿಲ್ಲ, ಅಂಬೇಡ್ಕರ್ ಮತ್ತು ಪೆರಿಯಾರ್ ಸಿದ್ಧಾಂತಗಳನ್ನು ಪ್ರಚಾರ ಮಾಡುತ್ತಿದ್ದೇವೆ, ಹೀಮದೂ ಧರ್ಮದ ಜಾತಿ ವ್ಯವಸ್ಥೆಯ ವಿರುದ್ಧ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಸಂಘಟನೆ ಹೇಳಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.