ನವದೆಹಲಿ: ದೆಹಲಿಯ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ವಿಪರೀತಗೊಳ್ಳುತ್ತಿದೆ. ಜನರು ಹೊರಗಡೆ ಓಡಾಡುವುದೇ ಕಷ್ಟ ಎಂಬಂತಹ ಸ್ಥಿತಿ ಉದ್ಭವವಾಗಿದೆ. ಬೆಳಗ್ಗಿನ ಜಾವದ ಚಟುವಟಿಕೆಯನ್ನು ರದ್ದುಗೊಳಿಸಿ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ. ಶಾಲೆಗಳಿಗೂ ರಜೆ ನೀಡಲಾಗಿದೆ.
ದೆಹಲಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಸುಮಾರು 9 ಸಾವಿರ ಸೈನಿಕರಿಗೆ ಮಾಸ್ಕ್ಗಳನ್ನು ವಿತರಣೆ ಮಾಡಲಾಗಿದೆ. ವಿವಿಧ ಸಚಿವಾಲಯ, ಏರ್ಪೋರ್ಟ್, ಮೆಟ್ರೋಗಳಲ್ಲಿ ಸೈನಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಟಾಕ್ಸಿಕ್ ಸ್ಮಾಗ್ನಿಂದ ಬಚಾವಾಗಲು ಮಹಿಳೆ, ಪುರುಷರೆಲ್ಲರೂ ಮಾಸ್ಕ್ ಧರಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ 2 ಸಾವಿರ ಮಾಸ್ಕ್ಗಳನ್ನು ಹಂಚಲಾಗಿದೆ. 7 ಸಾವಿರ ಮಾಸ್ಕ್ಗಳಿಗಾಗಿ ಆರ್ಡರ್ ಮಾಡಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.