ನವದೆಹಲಿ: ಅನಾಣ್ಯೀಕರಣಕ್ಕೆ ಇಂದಿಗೆ ಒಂದು ವರ್ಷ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ‘ಕಪ್ಪುಹಣ ವಿರೋಧಿ’ ದಿನಾಚರಣೆ ನಡೆಸುತ್ತಿದೆ. ಸರ್ಕಾರದ ಈ ಕಠಿಣ ಕ್ರಮವನ್ನು ಬೆಂಬಲಿಸಿದ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಸಮರ್ಪಿಸಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, ‘125 ಕೋಟಿ ಭಾರತೀಯರು ನಿರ್ಣಾಯಕ ಯುದ್ಧವನ್ನು ಹೋರಾಡಿ ಗೆದ್ದಿದ್ದಾರೆ’ ಎಂದರು.
‘ಭ್ರಷ್ಟಾಚಾರ ಮತ್ತು ಕಪ್ಪು ಹಣದ ನಿರ್ಮೂಲನೆಗೆ ಸರ್ಕಾರ ತೆಗೆದುಕೊಂಡ ಹಲವಾರು ಕ್ರಮಗಳನ್ನು ಬೆಂಬಲಿಸಿದ ದೇಶದ ಜನತೆಗೆ ಧನ್ಯವಾದಗಳು’ ಎಂದಿದ್ದಾರೆ.
I bow to the people of India for steadfastly supporting the several measures taken by the Government to eradicate corruption and black money. #AntiBlackMoneyDay
— Narendra Modi (@narendramodi) November 8, 2017
2016ರ ನವೆಂಬರ್ 8 ರಂದು ಮೋದಿ ಅವರು ರೂ.1000 ಮತ್ತು ರೂ.500 ಮುಖಬೆಲೆಯ ನೋಟುಗಳನ್ನು ಏಕಾಏಕಿ ಬ್ಯಾನ್ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.