ನವದೆಹಲಿ: ಶೀಘ್ರದಲ್ಲೇ ಅನಿವಾಸಿ ಭಾರತೀಯರು ಕೂಡ ಮತದಾನ ಮಾಡುವ ಹಕ್ಕನ್ನು ಪಡೆಯಲಿದ್ದಾರೆ. ಈ ಬಗೆಗಿನ ಮಸೂದೆಯನ್ನು ಸಂಸತ್ತಿನಲ್ಲಿ ಮಂಡನೆಗೊಳಿಸಲು ಸರ್ಕಾರ ನಿರ್ಧರಿಸಿದೆ.
ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಈ ಬಗ್ಗೆ ಶುಕ್ರವಾರ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿದ್ದಾರೆ. ಈ ಬಗೆಗಿನ ಪ್ರಕ್ರಿಯೆಯನ್ನು 12 ವಾರಗಳಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂ ಸೂಚಿಸಿದೆ.
ರೆಪ್ರೆಸೆಂಟೇಟಿವ್ ಆಫ್ ಪೀಪಲ್ ಆಕ್ಟ್ಗೆ ತಿದ್ದುಪಡಿ ತಂದು ಅನಿವಾಸಿ ಭಾರತೀಯರಿಗೆ ಮತದಾನ ಮಾಡುವ ಅವಕಾಶವನ್ನು ನೀಡಬೇಕಿದೆ.
ತಮ್ಮ ಕ್ಷೇತ್ರದಲ್ಲಿ ವಾಸಿಸುವ ವ್ಯಕ್ತಿಯನ್ನು ತನ್ನ ಪ್ರತಿನಿಧಿಯನ್ನಾಗಿಸಿ ಆತನ ಮುಖಾಂತರ ನಿವಾಸಿ ಭಾರತೀಯ ಮತದಾನವನ್ನು ಮಾಡಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.