ನವದೆಹಲಿ: ಇಂಧನ ಕಾರ್ಯದರ್ಶಿಯಾಗಿದ್ದ ಪ್ರದೀಪ್ ಕುಮಾರ್ ಸಿನ್ಹಾ ಅವರನ್ನು ಕೇಂದ್ರ ಸಂಪುಟದ ಕಾರ್ಯದರ್ಶಿಯಾಗಿ ನರೇಂದ್ರ ಮೋದಿ ಸರ್ಕಾರ ನೇಮಕ ಮಾಡಿದೆ.
ಪ್ರಸ್ತುತ ಸಂಪುಟ ಕಾರ್ಯದರ್ಶಿಯಾಗಿರುವ ಅಜಿತ್ ಸೇತ್ ಅವರ ಜಾಗಕ್ಕೆ ಸಿನ್ಹಾ ಅವರನ್ನು ನೇಮಿಸಲಾಗಿದೆ. ಇವರು ಉತ್ತರ ಪ್ರದೇಶದ ಐಎಎಸ್ ಅಧಿಕಾರಿಯಾಗಿದ್ದಾರೆ.
ಜೂನ್ ೧೩ರಿಂದ ಅನ್ವಯವಾಗುವಂತೆ ಸಂಪುಟದ ಕಾರ್ಯದರ್ಶಿಯಾಗಿ ಪಿ.ಕೆ. ಸಿನ್ಹಾ ಅವರ ನೇಮಕಕ್ಕೆ ಪ್ರಧಾನಿ ಮೋದಿ ಅವರು ಒಪ್ಪಿಗೆ ನೀಡಿದ್ದಾರೆ. ನೂತನ ಕಾರ್ಯದರ್ಶಿಯಾಗಿ ಸಿನ್ಹಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಶುಕ್ರವಾರ ಪ್ರಧಾನ ಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.