ಬೆಳ್ತಂಗಡಿ: ವಿತ್ತೀಯ ಸೇರ್ಪಡೆಯು ಸಬಲೀಕರಣ ಹಾಗೂ ಆಭಿವೃದ್ಧಿಯಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ಮಹಿಳೆಯರು ಬ್ಯಾಂಕಿಂಗ್ ವ್ಯವಹಾರಗಳ ಹಾಗೂ ವಿವಿಧ ಯೋಜನೆಗಳ ಬಗ್ಗೆ ತಿಳಿದುಕೊಳ್ಳುವುದು ಅತೀ ಅಗತ್ಯ. ಇದು ಮಹಿಳೆಯರಲ್ಲಿ ಉಳಿತಾಯ ಹಾಗೂ ಹೂಡಿಕೆಯ ಅವಕಾಶಗಳ ಬಗ್ಗೆ ಜಾಗೃತಿ ಮೂಡಿಸಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿ ಸಾಧಿಸಲು ಸಹಕಾರಿ ಎಂದು ಉಜಿರೆಯ ಕರ್ನಾಟಕ ಬ್ಯಾಂಕ್ನ ಅಧಿಕಾರಿ ಹಾಗೂ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ನ ಸದಸ್ಯೆ ಜ್ಯೋತಿ ಪ್ರತಾಪ್ ತಿಳಿಸಿದರು.
ಜ್ಯೋತಿ ಅವರು ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ನಿಂದ ಇತ್ತೀಚೆಗೆ ಬೆಳ್ತಂಗಡಿ ರೋಟರಿ ಭವನದಲ್ಲಿ ಮಹಿಳೆಯರಿಗಾಗಿ ಆಯೋಜಿಸಿದ ಬ್ಯಾಂಕಿಂಗ್ ಸೌಲಭ್ಯಗಳ ಬಗೆಗಿನ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು. ಆನ್ಸ್ ಕ್ಲಬ್ನ ಅಧ್ಯಕ್ಷೆ ಶ್ರೀಮತಿ ಹೇಮಲತಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀಮತಿ ಕೌಸಲ್ಯ ಪ್ರಭು ಸ್ವಾಗತಿಸಿ, ಕಾರ್ಯದರ್ಶಿ ನವೀನಾ ಜಯಕುಮಾರ್ ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.