ಮಂಗಳೂರು : ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿದು ವೃತ್ತಿಶಿಕ್ಷಣ ಕೋರ್ಸ್ಗಳ ಶುಲ್ಕ ಬಾರೀ ಏರಿಕೆ (20% ರಿಂದ 30%) ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಅಭಾವಿಪ ತೀವ್ರವಾಗಿ ಖಂಡಿಸಿದೆ. ತಕ್ಷಣ ಈ ವಿದ್ಯಾರ್ಥಿ ವಿರೋಧಿ ನೀತಿಯಿಂದ ಹಿಂದೆ ಸರಿಯದಿದ್ದಲ್ಲಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಈ ಮೂಲಕ ಎಚ್ಚರಿಕೆಯನ್ನು ನೀಡುತ್ತಿದೆ.
ಪ್ರಸ್ತುತ ಇಂಜಿನಿಯರಿಂಗ್ ಶುಲ್ಕ 38 ಸಾವಿರ ರೂ.ಗಳಿದ್ದು, ಅದನ್ನು ಭರಿಸಲು ವಿದ್ಯಾರ್ಥಿಗಳಿಗೆ ಕಷ್ಟವೆನಿಸುತ್ತಿದೆ. ಆದರೆ ಈಗ ಆ ಶುಲ್ಕವನ್ನು 45-50 ಸಾವಿರ ರೂ.ಗಳಿಗೆ ಏರಿಕೆಯಾಗುವಂತಾಗಿದೆ. ಮೆಡಿಕಲ್ ಶುಲ್ಕದಲ್ಲೂ 10 ಸಾವಿರ ರೂ. ಹಾಗೂ ಡೆಂಟಲ್ ಕೋರ್ಸ್ನಲ್ಲೂ 10 ಸಾವಿರ ಶುಲ್ಕ ಏರಿಕೆಯು ಅತ್ಯಂತ ಖಂಡನೀಯವಾಗಿದೆ. ಅಲ್ಲದೆ ಕಳೆದ ವರ್ಷ ಲಭ್ಯವಿದ್ದ ಖಾಸಗಿ ಕಾಲೇಜುಗಳ ಸರ್ಕಾರಿ ಕೋಟಾದ ಸೀಟುಗಳು ಬಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದ್ದರಿಂದ ಬಡ ವಿದ್ಯಾರ್ಥಿಗಳ ವೃತ್ತಿಪರ ಶಿಕ್ಷಣದ ಕನಸು ಕಮರಿದಂತಾಗಿದೆ ಎಂದು ಎಬಿವಿಪಿ ಹೇಳಿದೆ.
ಅತ್ಯಂತ ಆತಂಕಕಾರಿ ಸಂಗತಿ ಎಂದರೆ ಈಗಾಗಲೇ ಹಲವು ಹಗರಣಗಳಲ್ಲಿ ವಿದ್ಯಾರ್ಥಿ ವಿರೋಧಿ ಕೃತ್ಯಗಳಲ್ಲಿ ಭಾಗವಹಿಸಿರುವ ಕಾಮೆಡ್-ಕೆ ಗೆ ಅಧಿಕೃತ ಮಾನ್ಯತೆ ನೀಡಿರುವ ಕ್ರಮವು ಸರ್ಕಾರದ ಅಸಂವೇದನಾಶೀಲತೆಗೆ ಹಿಡಿದ ಕೈಗನ್ನಡಿಯಾಗಿದೆ. ಹಲವು ಅಕ್ರಮಗಳ ಆಗರವಾಗಿರುವ ಕಾಮೆಡ್-ಕೆ ನಿರ್ಭಂದಿಸುವ ಬದಲು ಮಾನ್ಯಗೊಳಿಸುತ್ತಿರುವ ಕ್ರಮವನ್ನು ಅಭಾವಿಪ ಕಟು ಶಬ್ದಗಳಲ್ಲಿ ಖಂಡಿಸಿದೆ.
ಸರ್ಕಾರದ ಈ ವಿದ್ಯಾರ್ಥಿ ವಿರೋಧಿ ನೀತಿಯನ್ನು ಖಂಡಿಸಿ ಅಭಾವಿಪ ಮೇ.25 ರಿಂದ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು, ವಿದ್ಯಾರ್ಥಿಗಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟಗಳಲ್ಲಿ ಭಾಗವಹಿಸಬೇಕೆಂದು ಈ ಮೂಲಕ ಕರೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.