ಹೈದರಾಬಾದ್: ಇಂದಿನಿಂದ ಹೈದರಾಬಾದ್ನಲ್ಲಿ ಗ್ಲೋಬಲ್ ಎಂಟರ್ಪ್ರೆನ್ಯೂರ್ಶಿಪ್ ಸಮಿತ್ ನಡೆಯಲಿದ್ದು, ಇದರಲ್ಲಿ ಭಾಗವಹಿಸುವ ಸಲುವಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಹಾಗೂ ಸಲಹೆಗಾರ್ತಿ ಇವಾಂಕ ಟ್ರಂಪ್ ಅವರು ಭಾರತಕ್ಕೆ ಆಗಮಿಸಿದ್ದಾರೆ.
ಇವಾಂಕ ಅವರು ಸಮಿತ್ನಲ್ಲಿ ಅಮೆರಿಕಾದ 350 ಮಂದಿಯ ನಿಯೋಗವನ್ನು ಮುನ್ನಡೆಸಲಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅವರು ಸಮಿತ್ನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಟ್ರಂಪ್ ಅವರ ನಂಬಿಕಸ್ಥ ಸಲಹೆಗಾರ್ತಿಯಾಗಿರುವ ಇವಾಂಕ ಅವರು ಅಂತಾರಾಷ್ಟ್ರೀಯ ವೇದಿಕೆಯನ್ನು ವೈಯಕ್ತಿಕವಾಗಿ ಇದೇ ಮೊದಲ ಬಾರಿಗೆ ತಮ್ಮನ್ನು ಬಿಂಬಿಸುತ್ತಿದ್ದಾರೆ.
ಮೂರು ದಿನಗಳ ಕಾಲ ಸಮಿತ್ ನಡೆಯಲಿದ್ದು, 1,200 ಯುವ, ಬಹುತೇಕ ಮಹಿಳಾ ಉದ್ಯಮಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.