ನವದೆಹಲಿ: ಅಪೌಷ್ಠಿಕತೆ, ಬೆಳವಣಿಗೆ ಕುಸಿತ ಮತ್ತು ಕಡಿಮೆ ಜನನ ತೂಕಗಳ ಸಮಸ್ಯೆಯನ್ನು ಹೋಗಲಾಡಿಸಲು (ರಾಷ್ಟ್ರೀಯ ಪೌಷ್ಠಿಕ ಮಿಶನ್)ನನ್ನು ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದಕ್ಕೆ ಸಂಪುಟದ ಅನುಮೋದನೆ ಸಿಕ್ಕಿದೆ.
ಈ ಮಿಶನ್ನಡಿ ಪೌಷ್ಠಿಕ ಆಹಾರ ಯೋಜನೆಯನ್ನು ತರಾಲುತ್ತಿದೆ. ಈ ಯೋಜನೆಗಾಗಿ ಮೂರು ವರ್ಷಕ್ಕೆ ರೂ.9046.17 ಕೋಟಿ ಬಜೆಟ್ನ್ನು ಮೀಸಲಿಡಲು ನಿರ್ಧರಿಸಲಾಗಿದೆ. ಸಮರ್ಪಕ ಅನುಷ್ಠಾನಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ಫೋನ್, ಟ್ಯಾಬ್ ವಿತರಿಸಲು ನಿರ್ಧರಿಸಲಾಗಿದೆ.
ಈ ಮಿಶನ್ನಡಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವಾಲಯ, ಆರೋಗ್ಯ ಸಚಿವಾಲಯ, ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯಗಳನ್ನು ಒಮದೇ ವೇದಿಕೆಯಡಿ ತರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.