ಬೀಜಿಂಗ್: ಏಷ್ಯಾದ ದಿಗ್ಗಜ ರಾಷ್ಟ್ರಗಳಾದ ಭಾರತ ಮತ್ತು ಚೀನಾದ ನಡುವಣ ಸಂಬಂಧ ಉತ್ತಮವಾಗಿದ್ದರೆ ಮತ್ತು ಭಾರತೀಯ ಆರ್ಥಿಕ ಪಥವು ಚೀನಾವನ್ನು ಅನುಸರಿಸಿದರೆ ಮುಂದಿನ ಮೂರು ದಶಕಗಳಲ್ಲಿ ಭಾರತ ಹೆಚ್ಚಿನ ಆರ್ಥಿಕ ಪ್ರಗತಿ ದರದ ಬ್ಯಾಟನ್ನನ್ನು ಚೀನಾದಿಂದ ತನ್ನ ವಶಕ್ಕೆ ಪಡೆಯಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.
2008ರ ಜಾಗತಿಕ ಆರ್ಥಿಕ ಕುಸಿತದ ಬಳಿಕ ಇದೇ ಮೊದಲ ಬಾರಿಗೆ ಪ್ರಮುಖ ಆರ್ಥಿಕತೆಗಳಾದ ಯುಎಸ್, ಯುರೋಪ್, ಜಪಾನ್ನಂತಹ ರಾಷ್ಟ್ರಗಳ ನಡುವೆ ಸಮತೋಲಿತ ಆರ್ಥಿಕ ಚೇತರಿಕೆ ಕಂಡುಬರುತ್ತಿದೆ ಎಂದಿದ್ದಾರೆ.
ಈ ಸನ್ನಿವೇಶದಲ್ಲಿ ಭಾರತ ಮತ್ತು ಚೀನಾ ಜಾಗತಿಕ ಸಮತೋಲಿತ ಚೇತರಿಕೆಯಲ್ಲಿ ತಮ್ಮ ಸ್ಥಾನವನ್ನು ಸ್ಥಾಪಿಸಿಕೊಳ್ಳಬೇಕು. ಉಭಯ ದೇಶಗಳು ಒಟ್ಟಾಗಿ ಪರಸ್ಪರ ಒಟ್ಟಾಗಿ ಸಹಾಯ ಮಾಡಬೇಕು. ಇದರಿಂದ ಪ್ರಗತಿ ಸಾಧ್ಯ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.