ಬದಿಯಡ್ಕ : ಮುಳ್ಳೇರಿಯದಲ್ಲಿ ಸುಸಜ್ಜಿತ ಬಸ್ಸು ನಿಲ್ದಾಣ ನಿರ್ಮಿಸುವ ಸಲುವಾಗಿ ಅರಣ್ಯ ಇಲಾಖೆಯ ಸ್ಥಳವನ್ನು ಬಿಟ್ಟು ಕೊಡಬೇಕೆಂಬ ಬಿಜೆಪಿಯ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವೇಡ್ಕರ್ ಅವರನ್ನು ಪಕ್ಷದ ಮಂಡಲ ಅಧ್ಯಕ್ಷ ಸುಧಾಮ ಗೋಸಾಡ ಅಭಿನಂದಿಸಿದ್ದಾರೆ. ಮುಳ್ಳೇರಿಯದಲ್ಲಿ ಸುಸಜ್ಜಿತ ಬಸ್ಸು ನಿಲ್ದಾಣ ಅತ್ಯಗತ್ಯವಾಗಿದೆ. ಆದರೆ ಸ್ಥಳದ ಕೊರತೆ ಇದಕ್ಕೆ ದೊಡ್ಡ ಅಡ್ಡಿಯಾಗಿತ್ತು.
ಬಸ್ಸು ನಿಲ್ದಾಣಕ್ಕಾಗಿ ಸ್ಥಳ ಬಿಟ್ಟು ಕೊಟಬೇಕೆಂದು ರಾಜ್ಯ ಅರಣ್ಯ ಇಲಾಖೆ, ಕಂದಾಯ ಇಲಾಖೆ, ಜಿಲ್ಲಾಧಿಕಾರಿ ಸಹಿತ ಹಲವರಿಗೆ ಹಲವು ಮನವಿಗಳನ್ನು ಸಲ್ಲಿಸಲಾಗಿತ್ತು. ಆದರೆ ಮುಸ್ಲಿಂ ಲೀಗಿನ ಕುಮ್ಮಕ್ಕಿನಿಂದಾಗಿ ಸ್ಥಳ ನೀಡಿಕೆ ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸುರೇಂದ್ರನ್ ಮೂಲಕ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಲಾಯಿತು ಹಾಗೂ ಮುಳ್ಳೇರಿಯ ಪೇಟೆಯ ಸಮಸ್ಯೆಯ ಬಗ್ಗೆ ಕೇಂದ್ರ ಸಚಿವರಿಗೆ ಮನದಟ್ಟು ಮಾಡಲಾಯಿತು.
ಸಮಸ್ಯೆಯನ್ನು ಮನಗಂಡ ಕೇಂದ್ರ ಸಚಿವ ಪ್ರಕಾಶ್ ಜಾವೇಡ್ಕರ್ ಈ ಬಗ್ಗೆ ಪರಿಶೀಲಿಸುವುದಾಗಿ ಬಹಿರಂಗ ಹೇಳಿಕೆ ನೀಡಿದ್ದಾರೆ. ಕೇಂದ್ರ ಸಚಿವರನ್ನು ಇದಕ್ಕಾಗಿ ಸಹಕರಿಸಿದ ಕೆ.ಸುರೇಂದ್ರನ್ ಅವರನ್ನು ಸುಧಾಮ ಗೋಸಾಡ ಅವರು ಅಭಿನಂದಿಸಿ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.