ರಾಯ್ಪುರ: ಛತ್ತೀಸ್ಗಢದ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ತಮ್ಮ ಅಧಿಕಾರದ 14 ವರ್ಷಗಳನ್ನು ಪೂರೈಸಿದ್ದಾರೆ. ನಕ್ಸಲ್ ಪೀಡಿತ ರಾಜ್ಯವೊಂದನ್ನು ಸುಧೀರ್ಘ ವರ್ಷಗಳ ಕಾಲ ಯಾವುದೇ ಅಡೆತಡೆ ಇಲ್ಲದೆ ಮುನ್ನಡೆಸಿದ್ದು ಅವರ ಹೆಗ್ಗಳಿಕೆಯಾಗಿದೆ.
14 ವರ್ಷಗಳ ಕಾಲ ತನ್ನ ರಾಜ್ಯದ ಜನತೆ ನೀಡಿದ ಸಹಕಾರ, ಪ್ರೀತಿ, ಬಾಂಧವ್ಯಕ್ಕೆ ಅವರು ಧನ್ಯವಾದ ಸಮರ್ಪಣೆ ಮಾಡಿದ್ದಾರೆ.
ಸರ್ಕಾರದ ಯಶಸ್ಸು, ಸಾಧನೆಗಳೆಲ್ಲವೂ ಜನತೆಯ ಶ್ರಮದಿಂದ ಸಾಧ್ಯವಾಗಿದ್ದು ಎಂದಿರುವ ಅವರು, ಕಳೆದ 14 ವರ್ಷದಿಂದ ಛತ್ತೀಸ್ಗಢ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆ ಎನಿಸಿಕೊಂಡಿದೆ. ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದುಕೊಂಡಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.