ನವದೆಹಲಿ: ಅಭ್ಯರ್ಥಿಗಳಿಗೆ ಎರಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಬಾರದು ಎಂದು ಚುನಾವಣಾ ಆಯೋಗ ಸುಪ್ರೀಂಕೋರ್ಟ್ಗೆ ಮನವಿ ಮಾಡಿಕೊಂಡಿದೆ. ಕೋರ್ಟ್ ಈ ವಿಷಯದಲ್ಲಿ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರ ಸಲಹೆಯನ್ನು ಕೇಳಿದೆ.
ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ.ಎ.ಎಂ ಖನ್ವಿಲ್ಕರ್, ನ್ಯಾ.ಡಿ.ವೈ ಚಂದ್ರಚೂಡ ಅವರು ಅರ್ಜಿ ಸಲ್ಲಿಸಿದ ವಕೀಲ ಅಶ್ವನಿ ಕುಮಾರ್ ಉಪಾಧ್ಯಾಯ ಅವರಿಗೆ ಪಿಟಿಷನ್ನ ನಕಲಿ ಪ್ರತಿಯನ್ನು ಅಟಾರ್ನಿ ಜನರಲ್ ಅವರಿಗೆ ಕಳುಹಿಸುವಂತೆ ಸೂಚಿಸಿದ್ದಾರೆ.
ಉಪಾಧ್ಯಾಯ ಅವರು ಬಿಜೆಪಿ ಮುಖಂಡರಾಉದ್ದು, ಅಭ್ಯರ್ಥಿಗಳಿಗೆ ಎರಡು ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಸ ಕಲ್ಪಿಸುವ ರೆಪ್ರೆಸೆಂಟೇಶನ್ ಆಫ್ ದಿ ಪೀಪಲ್ಸ್ ಆಕ್ಟ್ನ 33(70)ನೇ ಸೆಕ್ಷನ್ನನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.
‘ಒಬ್ಬ ವ್ಯಕ್ತಿ ಒಂದು ಮತ’ ಇರುವಂತೆಯೇ ‘ಬಬ್ಬ ಅಭ್ಯರ್ಥಿ ಒಂದೇ ಕ್ಷೇತ್ರ’ ಇರಬೇಕು ಎಂದು ಉಪಧ್ಯಾಯ ಪ್ರತಿಪಾದಿಸಿದ್ದಾರೆ.
ಚುನಾವಣಾ ಆಯೋಗವೂ ಈ ಮಾತಿಗೆ ಸಮ್ಮತಿ ಸೂಚಿಸಿದೆ. ಸರ್ಕಾರದ ನಿಲುವು ಏನು ಎಂಬುದು ಇನ್ನು ಸ್ಪಷ್ಟವಾಗಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.