ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲೇ ಇಸ್ರೇಲ್ಗೆ ಪ್ರವಾಸಕೈಗೊಳ್ಳಲಿದ್ದಾರೆ. ಆ ಮೂಲಕ ಯಹೂದಿ ರಾಷ್ಟ್ರವಾದ ಇಸ್ರೇಲ್ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ.
ಮೋದಿ ಇಸ್ರೇಲ್ ಪ್ರವಾಸಕ್ಕೆ ದಿನಾಂಕ ನಿಗದಿಯಾಗಿಲ್ಲ, ಉಭಯ ದೇಶಗಳಿಗೆ ಅನುಕೂಲಕರವಾಗುವಂತೆ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ದ್ವಿಪಕ್ಷೀಯ ರಕ್ಷಣಾ ಸಹಕಾರವನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಇಸ್ರೇಲ್ಗೆ ಪ್ರಯಾಣ ಬೆಳೆಸಲಿದ್ದಾರೆ.
1950ರಲ್ಲಿ ರಾಷ್ಟ್ರವಾಗಿ ಹೊರಹೊಮ್ಮಿದ್ದ ಇಸ್ರೇಲ್ ಜೊತೆ 1992ರಿಂದ ಭಾರತ ಪೂರ್ಣ ರಾಜತಾಂತ್ರಿಕ ಸಂಬಂಧವನ್ನು ಆರಂಭಿಸಿತು. ಆದರೆ ಇದುವರೆಗೆ ಭಾರತದ ಪ್ರಧಾನಿಯಾಗಲಿ ಅಥವಾ ರಾಷ್ಟ್ರಪತಿಗಳಾಗಲಿ ಅಲ್ಲಿಗೆ ಭೇಟಿ ನೀಡಿಲ್ಲ.
2003ರಲ್ಲಿ ಆಗಿನ ಇಸ್ರೇಲ್ ಪ್ರಧಾನಿಯಾಗಿದ್ದ ಏರಿಯಲ್ ಶ್ಯಾರೋನ್ ಅವರು ಭಾರತಕ್ಕೆ ಭೇಟಿ ನೀಡಿದ್ದರು.
ಅಟಲ್ ಜೀ ಸರ್ಕಾರದಲ್ಲಿ ಗೃಹಸಚಿವರಾಗಿದ್ದ ಎಲ್.ಕೆ.ಅಡ್ವಾಣಿಯವರು ಇಸ್ರೇಲ್ಗೆ ಭೇಟಿ ನೀಡಿದ್ದರು. ಬಳಿಕ ಜಸ್ವಂತ್ ಸಿಂಗ್, ಎಸ್.ಎಂ ಕೃಷ್ಣ ಅವರೂ ಯಹೂದಿ ರಾಷ್ಟ್ರಕ್ಕೆ ಭೇಟಿ ನೀಡಿದ್ದರು. ಇತ್ತೀಚಿಗಷ್ಟೇ ರಾಜನಾಥ್ ಸಿಂಗ್ ಅವರೂ ಭೇಟಿ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.